ಭದ್ರಾವತಿ ಶಾಸಕ ಸಂಗಮೇಶ್ವರ್‌ ಪುತ್ರನ ಹತ್ಯೆಗೆ ಸಂಚು, ದಾಖಲಾಯ್ತು ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

BHADRAVATHI, 22 AUGUST 2024 | ಶಾಸಕ (MLA) ಬಿ.ಕೆ.ಸಂಗಮೇಶ್ವರ್‌ ಪುತ್ರ ಬಸವೇಶ್‌ ಹತ್ಯೆಗೆ ಸಂಚು ಹೂಡಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಸಂಬಂಧ ಭದ್ರಾವತಿ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಚ್ಚಿ ಮುಬಾರಕ್‌, ಟಿಪ್ಪು ಮತ್ತು ಇತರೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜೈಲಿನಿಂದಲೇ ಸ್ಕೆಚ್‌ ಆರೋಪ

ಮುಬಾರಕ್‌ ಅಲಿಯಾಸ್‌ ಡಿಚ್ಚಿ ಮುಬಾರಕ್‌ ಎಂಬಾತ ಜೈಲಿನಿಂದ ಭದ್ರಾವತಿಯ ಮುಬಾರಕ್‌ ಎಂಬಾತನಿಗೆ ಕರೆ ಮಾಡಿ, ಭದ್ರಾವತಿ ಗಾಂಧಿ ಸರ್ಕಲ್‌ ಬಳಿ ಬಸಣ್ಣನನ್ನು ಹತ್ಯೆ ಮಾಡುವಂತೆ ಟಿಪ್ಪು ಮತ್ತು ಇತರೆ ನಾಲ್ವರನ್ನು ಕಳುಹಿಸುತ್ತಿರುವುದಾಗಿ ತಿಳಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಗುತ್ತಿಗೆದಾರ ಸುನಿಲ್‌ ದೂರು ನೀಡಿದ್ದಾರೆ.

ಇದನ್ನೂ ಓದಿ ⇒ ‘ರಕ್ತ ಕೊಟ್ಟೇವು, ನೀರು ಕೊಡುವುದಿಲ್ಲ’ ಅಂದವರು ಈಗ ಧ್ವನಿ ಎತ್ತಬೇಕು, ಮಾಜಿ ಮಿನಿಸ್ಟರ್‌ ಆಗ್ರಹ

ಇನ್ನು, ಟಿಪ್ಪುವನ್ನು ಗುತ್ತಿಗೆದಾರ ಸುನಿಲ್‌ ಭೇಟಿಯಾದಾಗ ಆತ ಕೂಡ ಡಿಚ್ಚಿ ಮುಬಾರಕ್‌ ಕರೆ ಮಾಡಿ, ಕಾರು ಮತ್ತು ನಾಲ್ವರನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದಾನೆ ಎಂದು ತಿಳಿಸಿದ್ದ. ಬಸಣ್ಣನ ಹತ್ಯೆ ಮಾಡಬೇಕು ಎಂದು ಸೂಚಿಸಿದ್ದಾನೆ ಎಂದು ಹೇಳಿ, ಚಾಕುವೊಂದನ್ನು ಕೂಡ ತೋರಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ ⇒ ತೀರ್ಥಹಳ್ಳಿ ಠಾಣೆ ಮುಂದೆ ರಾತ್ರಿ ಪತ್ರಕರ್ತರಿಂದ ದಿಢೀರ್‌ ಧರಣಿ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment