ಶಿವಮೊಗ್ಗದಲ್ಲಿ ಪೊಲೀಸ್‌ ಠಾಣೆ ಮುಂದೆ 25 ಆಟೋ ಚಾಲಕರಿಂದ ಆಣೆ, ಪ್ರಮಾಣ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 JUNE 2024

SHIMOGA : ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕರಿಗೆ (Auto Drivers) ಇವತ್ತು ದೇವರ ಮೇಲೆ ಆಣೆ ಮಾಡಿಸಲಾಯಿತು. ಇನ್ಮುಂದೆ ಟ್ರಾಫಿಕ್‌ ನಿಯಮ ಉಲ್ಲಂಘನೆ ಮಾಡುವುದಿಲ್ಲ ಎಂದು ಸಂಚಾರ ಪೊಲೀಸರು ಪ್ರತಿಜ್ಞೆ ಸ್ವೀಕರಿಸುವಂತೆ ಮಾಡಿದರು.

ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ವಿವಿಧೆಡೆ ಸಂಚಾರ ನಿಯಮ ಉಲ್ಲಂಘಿಸಿದ 25 ಆಟೋಗಳನ್ನು ವಶಕ್ಕೆ ಪಡೆಯಲಾಯಿತು. ಆಟೋಗಳ ದಾಖಲೆ ಪರಿಶೀಲಿಸಿದ ಸಂಚಾರ ಪೊಲೀಸರು, ದಂಡ ವಿಧಿಸಿದರು. ಬಳಿಕ ಆಟೋ ಚಾಲಕರಿಂದ ಪ್ರಮಾಣ ಮಾಡಿಸಿದರು.

Oath-by-auto-drivers-in-Shimoga-Traffic-Police.

ಆಣೆ, ಪ್ರಮಾಣ ಮಾಡಿದ ಚಾಲಕರು

‘ಇನ್ಮುಂದೆ ಸಂಚಾರ ನಿಯಮ ಉಲ್ಲಂಘನೆ ಮಾಡುವುದಿಲ್ಲ . ಆಟೋಗೆ ಸಂಬಂಧಿಸಿದ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುತ್ತೇನೆ ಎಂದು ದೇವರ ಮೇಲೆ ಪ್ರಮಾಣ ಮಾಡುತ್ತೇನೆʼ ಎಂದು ಆಟೋ ಚಾಲಕರು ಪ್ರತಿಜ್ಞೆ ಸ್ವೀಕರಿಸುವಂತೆ ಮಾಡಲಾಯಿತು. ದೇವರ ಮೇಲೆ ಪ್ರಮಾಣ ಮಾಡಿದರೆ ಭಯ, ಭಕ್ತಿಯಿಂದ ನಡೆದುಕೊಳ್ಳಬಹುದು ಎಂಬ ನಂಬಿಕೆಯೊಂದಿಗೆ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.

ಕಾರ್ಯಾಚರಣೆಯಲ್ಲಿ ಪಶ್ಚಿಮ ಸಂಚಾರ ಠಾಣೆಯ ಎಎಸ್‌ಐ ಕೃಷ್ಣಪ್ಪ, ಪ್ರಶಾಂತ್‌, ಪ್ರಕಾಶ್‌, ಸುರೇಶ್‌, ಕಿರಣ್‌, ಹರೀಶ್‌, ಪ್ರವೀಣ್‌, ಚಂದ್ರು ಭಾಗವಹಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಕುಡಿಯುವ ನೀರು ಬರೋದು ಅನುಮಾನ, ಯಾವ್ಯಾವ ದಿನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment