ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಉದ್ಯಮಿಯ ಮನೆ ಮೇಲೆ ಪೆಟ್ರೋಲ್ ಬಾಂಬ್ ಹಾಕಿ, ಮನೆಯಲ್ಲಿದ್ದವರನ್ನು ಹತ್ಯೆ ಮಾಡುವ ಬೆದರಿಕೆ ಒಡ್ಡಿದ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಈತನ ವಿರುದ್ಧ ಶಿವಮೊಗ್ಗದ ವಿವಿಧ ಠಾಣೆಯಲ್ಲಿ 53 ಪ್ರಕರಣ ದಾಖಲಾಗಿದ್ದವು. ರಾಜ್ಯದ ವಿವಿಧೆಡೆಯೂ ಈತನ ವಿರುದ್ಧ ಕೇಸ್’ಗಳಿವೆ.
ಏನಿದು ಪ್ರಕರಣ?
ಶಿವಮೊಗ್ಗದ ಶಾದ್ ನಗರದ ಉದ್ಯಮಿಯೊಬ್ಬರ ಮನೆ ಮೇಲೆ ಅಕ್ಟೋಬರ್ 20ರ ರಾತ್ರಿ ಕಲ್ಲು ತೂರಾಟ ನಡೆಸಲಾಗಿತ್ತು. ಮನೆ ಗೇಟು, ಬಾಗಿಲಿಗೆ ಕಲ್ಲು ಬಿದ್ದಿದ್ದವು. ಇದಾಗಿ ಕೆಲವೇ ಹೊತ್ತಿನಲ್ಲಿ ಉದ್ಯಮಿಗೆ ವಾಟ್ಸಪ್’ನಲ್ಲಿ ಕರೆ ಮಾಡಿದ್ದ ದುಷ್ಕರ್ಮಿಯೊಬ್ಬ, ಹಣಕ್ಕೆ ಬೇಡಿಕೆಯಿಟ್ಟಿದ್ದ. ಒಂದು ವೇಳೆ ಹಣ ಕೊಡದಿದ್ದರೆ ಮನೆ ಮೇಲೆ ಪಟ್ರೋಲ್ ಬಾಂಬ್ ದಾಳಿ ಮಾಡಲಾಗುತ್ತದೆ. ಮನೆಯಲ್ಲಿದ್ದವರ ಕೊಲೆ ಮಾಡುವುದಾಗಿ ಬೆದರಿಸಿದ್ದ.
ಮುಂಬೈನಲ್ಲಿ ಸಿಕ್ಕ ಬಚ್ಚನ್
ಪ್ರಕರಣ ತನಿಖೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್’ಪೆಕ್ಟರ್ ಸಂಜೀವ್ ಕುಮಾರ್ ಮತ್ತು ಕುಂಸಿ ಠಾಣೆ ಇನ್ಸ್’ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್ ಅವರ ನೇತೃತ್ವದಲ್ಲಿ ಎರಡು ತಂಡ ರಚಿಸಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಮುಂಬೈನಲ್ಲಿ ಪ್ರಮುಖ ಆರೋಪಿ ಬಚ್ಚಾ ಅಲಿಯಾಸ್ ಬಚ್ಚನ್ ಅಲಿಯಾಸ್ ಜಮೀರ್ (29) ಎಂಬಾತನನ್ನು ಬಂಧಿಸಿದ್ದಾರೆ. ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಶಿವಮೊಗ್ಗ ಬಸವನಗುಡಿಯ ಮಹಮದ್ ತೌಹಿದ್ (19), ಮೊಹಮದ್ ಬಿಲಾಲ್ (21) ಎಂಬುವವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದ ಉದ್ಯಮಿ ಮನೆ ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆಯುವ ಬೆದರಿಕೆ
ಮೊಬೈಲು, ಕಾರು, ಡಾಂಗಲ್
ಬಂಧಿತರಿಂದ ಶಿವಮೊಗ್ಗ ಪೊಲೀಸರು ಮೂರು ಮೊಬೈಲ್ ಫೋನ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಮೂರು ಇಂಟರ್’ನೆಟ್ ಡಾಂಗಲ್ ಕೂಡ ಸೀಜ್ ಮಾಡಿಕೊಂಡಿದ್ದಾರೆ. ಒಂದು ಕಾರನ್ನು ಕೂಡ ಸೀಜ್ ಮಾಡಲಾಗಿದೆ.

ಸಾಮಾನ್ಯನಲ್ಲ ಈ ಬಚ್ಚನ್
ಕೊಲೆ ಬೆದರಿಕೆಯೊಡ್ಡಿ ಹಣ ವಸೂಲಿ ಮಾಡುವ ಕೃತ್ಯದಲ್ಲಿ ಬಚ್ಚನ್ ಹೆಸರು ಆಗಾಗ ಕೇಳಿ ಬರುತಿತ್ತು. ರಾಜ್ಯದ ವಿವಿಧೆಡೆ ಈತನ ವಿರುದ್ಧ ಕೊಲೆ ಬೆದರಿಕೆ, ಮಾರಣಾಂತಿಕ ಹಲ್ಲೆ, ವಂಚನೆ, ಶಸ್ತ್ರಾಸ್ತ್ರ ಕಾಯ್ದೆ, ದರೋಡೆ ಪ್ರಕರಣಗಳು ದಾಖಲಾಗಿವೆ.

ಬಚ್ಚನ್ ಅಲಿಯಾಸ್ ಬಚ್ಚಾ ಅಲಿಯಾಸ್ ಜಮೀರ್ ವಿರುದ್ಧ ಶಿವಮೊಗ್ಗದ ವಿವಿಧ ಠಾಣೆಗಳಲ್ಲಿ 53 ಪ್ರಕರಣ ದಾಖಲಾಗಿವೆ. ತುಂಗಾನಗರ ಠಾಣೆಯಲ್ಲಿ 50 ಪ್ರಕರಣ, ದೊಡ್ಡಪೇಟೆ ಠಾಣೆಯಲ್ಲಿ ಒಂದು ಪ್ರಕರಣ, ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿವೆ.
ಬಚ್ಚನ್ ವಿಚಾರಣೆ ನಡೆಯುತ್ತಿದ್ದು, ವಿವಿಧ ಪ್ರಕರಣಗಳ ಕುರಿತು ಮಹತ್ವದ ವಿಚಾರಗಳು ತಿಳಿದು ಬರುವ ಸಾಧ್ಯತೆ ಇದೆ.
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

- ಶಿವಮೊಗ್ಗ ಬೈಪಾಸ್ನಲ್ಲಿ ಧಗಧಗ ಉರಿದ ಮಳಿಗೆ, ವಸ್ತುಗಳು ಸ್ಪೋಟ, ಏನೇನಾಯ್ತು?

- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು






