ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MARCH 2021
ಕಬಡ್ಡಿ ಪಂದ್ಯಾವಳಿ ವೇಳೆ ಗಲಾಟೆ ಪ್ರಕರಣದಲ್ಲಿ ಭದ್ರಾವತಿ ಶಾಸಕ ಸಂಗಮೇಶ್ವರ್ ಸೇರಿ ಏಳು ಜನರ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣ ಸಂಬಂಧ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ.
ಇದನ್ನೂ ಓದಿ | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್
ಭದ್ರಾವತಿ ಶಾಸಕ ಸಂಗಮೇಶ್ವರ್, ಪುತ್ರರಾದ ಬಿ.ಎಸ್.ಗಣೇಶ್, ಬಿ.ಎಸ್.ಬಸವೇಶ್, ಸಂಗಮೇಶ್ವರ್ ಸಹೋದ ಬಿ.ಕೆ.ಮೋಹನ್, ಅವರ ಪುತ್ರರಾದ ಬಿ.ಎಂ.ರವಿ ಕುಮಾರ್, ಬಿ.ಎಂ.ಮಂಜುನಾಥ್, ಸ್ನೇಹಿತ ಸುನೀಲ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಇವರೆಲ್ಲರಿಗೂ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ಜಿ.ಕುಡುವಕ್ಕಲಿಗರ್ ಆದೇಶಿಸಿದ್ದಾರೆ.
ಇದನ್ನೂ ಓದಿ | ಭದ್ರಾವತಿ ಶಾಸಕ ಸಂಗಮೇಶ್ವರ್ ಬಂಧನದ ಹಳೆ ವಿಡಿಯೋ ವೈರಲ್, ಶಾಸಕರು ಗರಂ
ಪ್ರತಿಯೊಬ್ಬರಿಗೂ 50 ಸಾವಿರ ರೂ. ಬಾಂಡ್, ಒಬ್ಬ ಶೂರಿಟಿ ಪಡೆಯಲಾಗಿದೆ. ಪಂದ್ಯಾವಳಿ ವೇಳೆ ನಡೆದ ಗಲಾಟೆ ಸಂದರ್ಭ ಜಾತಿ ನಿಂದನೆ ಮಾಡಿದ್ದಾರೆ ಎಂದು ಮಹಾಂತೇಶ್ ಎಂಬುವವರು ದೂರು ನೀಡಿದ್ದರು.
ಇದನ್ನೂ ಓದಿ | ಭದ್ರಾವತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ, ಬಿಜೆಪಿಗೆ ಶಾಸಕ ಸಂಗಮೇಶ್ವರ್ ಸವಾಲು
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]