ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 ಮಾರ್ಚ್ 2022
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರ ಜತೆಗೆ ಬೆಂಗಳೂರಿನ ವಿಶೇಷ ತನಿಖಾ ತಂಡ ಕೈಜೋಡಿಸಿದೆ. ಇದುವರೆಗೆ ಶಿವಮೊಗ್ಗ ಪೊಲೀಸರು ಮಾತ್ರ ತನಿಖೆ ನಡೆಸುತ್ತಿದ್ದರು.
ಈ ಹಿಂದೆ ಎನ್ಐಎ ತನಿಖೆ ಮಾಡಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದರು. ಅದರ ಹೊರತಾಗಿ ಶಿವಮೊಗ್ಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆ ಇದೀಗ ಬೆಂಗಳೂರು ತಂಡವು ಶಿವಮೊಗ್ಗ ತಂಡದ ಜತೆ ತನಿಖೆ ಆರಂಭಿಸಿದೆ. ಈಗಾಗಲೇ 10 ಆರೋಪಿಗಳನ್ನು ಬಂಧಿಸಿರುವ ಶಿವಮೊಗ್ಗ ಪೊಲೀಸರಿಗೆ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ತಂಡ ಪೂರಕವಾಗಿ ಕೆಲಸ ಮಾಡುತ್ತಿದೆ.
ಹತ್ಯೆ ಹಿಂದೆ ಕೆಲ ಸಂಘಟನೆಗಳ ಅಥವಾ ಪ್ರಭಾವಿ ವ್ಯಕ್ತಿಗಳ ಬೆಂಬಲ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಅದೇ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ.
ಗಲಭೆ ಸಂಬಂಧ 41 ಎಫ್ಐಆರ್
ಹರ್ಷ ಅಂತಿಮ ಯಾತ್ರೆ ದಿನ ವಾಹನಗಳಿಗೆ ಬೆಂಕಿ, ಮನೆಗಳಿಗೆ ಹಾನಿ, ವ್ಯಾಪಾರಸ್ಥರಿಗೆ ತೊಂದರೆ ಸಂಬಂಧಿಸಿದಂತೆ 41 ಎಫ್ಐಆರ್ ದಾಖಲಾಗಿದೆ. ಆಸ್ತಿ ನಷ್ಟ ಹೊಂದಿದವರು ಎಫ್ಐಆರ್ ದಾಖಲಿಸಿದ್ದು ಪೊಲೀಸರು ಸಿಸಿ ಟಿವಿ ದೃಶ್ಯಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳು ವಿಡಿಯೋ ಮಾಡಲು ಹೋದಾಗ ಬೆದರಿಕೆ ಹಾಕಲಾಗಿತ್ತು. ಯಾರೊಬ್ಬರಿಗೂ ದಾಂಧಲೆ ನಡೆಸಿದ್ದ ವಿಡಿಯೋಗಳು ಸಿಕ್ಕಿರಲಿಲ್ಲ. ಕೆಲ ಟಿವಿ ಚಾನಲ್’ಗಳಲ್ಲಿ ಕದ್ದುಮುಚ್ಚಿ ವಿಡಿಯೋ ಮಾಡಲಾಗಿತ್ತು. ಇದರ ಹೊರತಾಗಿಯೂ ಮೆರವಣಿಗೆ ಸಾಗಿದ ರಸ್ತೆಗಳಲ್ಲಿ ಇದ್ದ ಸಿಸಿ ಕ್ಯಾಮೆರಾಗಳು ಪೊಲೀಸರಿಗೆ ನೆರವಾಗಿವೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















