ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯ ಹೆಸರಿನಲ್ಲಿ ಬ್ಯಾಂಕ್ ಖಾತೆ (bank account) ತೆರೆದು, ಅದರ ದಾಖಲೆಗಳನ್ನು ಬಳಸಿಕೊಂಡು ಸೈಬರ್ ವಂಚನೆಯ ಹಣ ವರ್ಗಾವಣೆಗೆ ದುರುಪಯೋಗ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಮಹಿಳೆಯೊಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದಾಗ ಉಷಾ ಎಂಬಾಕೆಯ ಪರಿಚಯವಾಗಿತ್ತು. ಆಕೆ ವ್ಯಕ್ತಿಯೊಬ್ಬರ ಮೂಲಕ ಮಹಿಳೆಗೆ ಸಂಘದ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿದ್ದಳು. ಈ ನೆಪದಲ್ಲಿ ಯೂನಿಯನ್ ಬ್ಯಾಂಕ್ನಲ್ಲಿ ಮಹಿಳೆ ಹೆಸರಿನಲ್ಲಿ ಉಳಿತಾಯ ಖಾತೆ ತೆರೆಯಲಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?
ಖಾತೆ ತೆರೆದ ನಂತರ ಅದರ ಎಟಿಎಂ ಕಾರ್ಡ್, ಚೆಕ್ ಬುಕ್ ಮತ್ತು ಬ್ಯಾಂಕ್ಗೆ ನೀಡಿದ್ದ ಸಿಮ್ ಕಾರ್ಡ್ ಅನ್ನು ಆ ವ್ಯಕ್ತಿ ತನ್ನ ಬಳಿಯೇ ಇಟ್ಟುಕೊಂಡಿದ್ದ. ಕೊನೆಗೆ ಆ ಬ್ಯಾಂಕ್ ಖಾತೆಯನ್ನು ಸೈಬರ್ ಅಪರಾಧಗಳಿಗೆ ಬಳಸಿ, ಲಕ್ಷಾಂತರ ರೂಪಾಯಿ ಹಣ ವರ್ಗಾವಣೆ ಮಾಡಿ ವಂಚಿಸಿರುವುದು ಗೊತ್ತಾಗಿದೆ. ಈ ಹಿನ್ನೆಲೆ ಶಿವಮೊಗ್ಗದ ಮಹಿಳೆ ಸಿ.ಇ.ಎನ್. ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

LATEST NEWS
- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

- ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?

- ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

- ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು















