ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 16 ಜುಲೈ 2019
ಆಕ್ಸಿಸ್ ಬ್ಯಾಂಕ್ ಹೆಸರಲ್ಲಿ ಕರೆ ಮಾಡಿ, ವ್ಯಕ್ತಿಯೊಬ್ಬರ ಖಾತೆಯಿಂದ 90 ಸಾವಿರ ರೂ. ಹಣ ದೋಚಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಿವಿಲ್ ಎಂಜಿನಿಯರ್ ಒಬ್ಬರನ್ನು ವಂಚಿಸಿ, ಅವರ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿಕೊಳ್ಳಲಾಗಿದೆ.
ಮಲ್ಲಿಗೇನಹಳ್ಳಿಯ ಕುಲವಂತ್ ಸಿಂಗ್ ಎಂಬುವವರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ತನ್ನನ್ನು ಆಕ್ಸಿಸ್ ಬ್ಯಾಂಕ್ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾನೆ. ಬ್ಯಾಂಕ್’ನಿಂದ ಹೆಚ್ಚುವರಿ ಸಾಲ ನೀಡುತ್ತಿರುವುದಾಗಿ ನಂಬಿಸಿದ್ದಾನೆ.
ಕುಲವಂತ್ ಸಿಂಗ್ ಅವರ ಕ್ರೆಡಿಟ್ ಕಾರ್ಡ್ ಮತ್ತು ಓಟಿಪಿ ನಂಬರ್ ಪಡೆದುಕೊಂಡ ವಂಚಕ, ಆನ್’ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ. ಕುಲವಂತ್ ಸಿಂಗ್ ಅವರ ಖಾತೆಯಿಂದ 90 ಸಾವಿರ ಹಣ ವರ್ಗಾವಣೆಯಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





