ಶಿವಮೊಗ್ಗ ಲೈವ್.ಕಾಂ | ANAVATTI NEWS | 04 ಅಕ್ಟೋಬರ್ 2021 (ಶಿವಮೊಗ್ಗ ಲೈವ್.ಕಾಂ | ಮುಂದಿನ 9 ಪ್ಯಾರಾಗಳು ಕೆಳಗಿವೆ)
ರಸ್ತೆ ಡಿವೈಡರ್’ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ್ದಾನೆ. ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸೊರಬ ತಾಲೂಕು ಆನವಟ್ಟಿಯಲ್ಲಿ ಘಟನೆ ಸಂಭವಿಸಿದೆ. ಸಮನವಳ್ಳಿ ಗ್ರಾಮದ ಕಾರ್ತಿಕ್ ಗುರಪ್ಪ (21) ಮೃತ ಬೈಕ್ ಸವಾರ. ಕೋಟಿಪುರದ ಕಡೆಯಿಂದ ಆನವಟ್ಟಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಕಾರ್ತಿಕ್ ಗುರಪ್ಪ ತಲೆಗೆ ತೀವ್ರ ಗಾಯವಾಗಿದೆ. ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಅಸುನೀಗಿದ್ದಾನೆ. ಕಾರ್ತಿಕ್, ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಯುವ ಘಟಕದ ಉಪಾಧ್ಯಕ್ಷರಾಗಿದ್ದರು. ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
