ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022
ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಾಯಗೊಂಡಿದ್ದು, ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸಾಗರ ರಸ್ತೆಯ ಪಿಇಎಸ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಅರುಣ್ ಕುಮಾರ್ ಎಂಬುವವರು ಸಮೀಪದ ಫಾರಂಗೆ ಹೋಗಿ ಕೆಲಸ ಮುಗಿಸಿ ಶಿವಮೊಗ್ಗಕ್ಕೆ ಮರಳುತ್ತಿದ್ದರು. ಅರುಣ್ ಕುಮಾರ್ ಅವರು ಚಲಿಸುತ್ತಿದ್ದ ಬೈಕಿಗೆ ಅದೆ ಮಾರ್ಗದಲ್ಲಿ ವೇಗವಾಗಿ ಬಂದ ಮತ್ತೊಂದು ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದಿದ್ದರಿಂದ ಅರುಣ್ ಕುಮಾರ್ ಅವರು ಕೆಳಗೆ ಬಿದ್ದಿದ್ದು ಕಾಲು, ಭುಜ, ಕೈಗೆ ಗಾಯವಾಗಿದೆ. ಕೂಡಲೆ ಅವರನ್ನು ನಂಜಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.
ಡಿಕ್ಕಿ ಹೊಡೆದ ಬೈಕ್ ಸವಾರನ ವಿರುದ್ಧ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಯುವಕ, ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






