ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ, ಎಂಟು ತಿಂಗಳ ಗರ್ಭಿಣಿ ಹೊಟ್ಟೆಗೆ ಪೆಟ್ಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | ACCIDENT | 31 ಮೇ 2022

ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಗರ್ಭಿಣಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಕೂಡಲೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶಿವಮೊಗ್ಗದ ವೆಂಕಟೇಶ ನಗರದ ಅನ್ವರ್ ಖಾನ್ ಮತ್ತು ಅವರ ಪತ್ನಿ ಎಂಟು ತಿಂಗಳ ಗರ್ಭಿಣಿ ರೇಷ್ಮಾ ಗಾಯಾಳುಗಳು. ಅನ್ವರ್ ಖಾನ್, ಪತ್ನಿ ರೇಷ್ಮಾ ಅವರು ತಮ್ಮ ಐದು ವರ್ಷದ ಮಗನೊಂದಿಗೆ ಹರಿಹರದಿಂದ ಶಿವಮೊಗಕ್ಕೆ ಬರುತ್ತಿದ್ದರು.

ಮಡಿಕೆ ಚೀಲೂರು ಗ್ರಾಮದಿಂದ ಸ್ವಲ್ಪ ದೂರದಲ್ಲಿ ಶಿವಮೊಗ್ಗದ ಕಡೆಯಿಂದ ಬಂದ ಬೈಕೊಂದು, ದಂಪತಿ ತೆರಳುತ್ತಿದ್ದ ಬೈಕಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡು ಬೈಕುಗಳು ಪಲ್ಟಿ ಹೊಡೆದಿವೆ. ಅನ್ವರ್ ಖಾನ್ ಕೈ ಮತ್ತು ಕಾಲಿಗೆ ಪೆಟ್ಟು ಬಿದ್ದಿದೆ. ರೇಷ್ಮಾ ಅವರ ಹೊಟ್ಟೆಗೆ ಪೆಟ್ಟು ಬಿದ್ದಿದೆ. ಸ್ಥಳೀಯರು ಕೂಡಲೆ ಅನ್ವರ್ ಖಾನ್ ಮತ್ತು ರೇಷ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

shimoga nanjappa hospital

ಇದನ್ನೂ ಓದಿ – ಮೆಗ್ಗಾನ್ ಆಸ್ಪತ್ರೆಯಲ್ಲಿ ಮುಂದುವರೆದ ಬೈಕ್ ಕಳ್ಳರ ಹಾವಳಿ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment