ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 6 FEBRUARY 2023
ಆಗುಂಬೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ
THIRTHAHALLI : ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ (bike accident) ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಆಗುಂಬೆ ರಸ್ತೆಯ ಬಾಳೆಬೈಲು ಮಲ್ನಾಡ್ ಕ್ಲಬ್ ಎದುರು ಪಟ್ಟಾಭಿರಾಮ್ ಎಂಬುವವರು ನಡೆದು ಹೋಗುತ್ತಿದ್ದಾಗ ಬೈಕ್ ಸವಾರ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡಿದ್ದ ಪಟ್ಟಾಭಿರಾಮ್ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂಗೂರು ಶಿವಮೊಗ್ಗ ರಸ್ತೆಯಲ್ಲಿ ಬೈಕ್ ಗೆ ಲಾರಿ ಡಿಕ್ಕಿ
SHIMOGA : ಬೈಕ್ ಸವಾರನಿಗೆ ಲಾರಿ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡಿರುವ ಬೈಕ್ ಸವಾರನನ್ನು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೂಗೂರು ಗ್ರಾಮದಿಂದ ರೋಷನ್ ಎಂಬುವವರು ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲವಗೊಪ್ಪದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಟಿ ಡಿಕ್ಕಿ
SHIMOGA : ಮಲವಗೊಪ್ಪದಲ್ಲಿ ರಸ್ತೆ ದಾಟುತ್ತಿದ್ದ ಹಾಲೇಶನಾಯ್ಕ ಎಂಬುವವರಿಗೆ ಟಿಟಿ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಸರ್ಕಾರಿ ಶಾಲೆ ಬಳಿ ಹಾಲೇಶನಾಯ್ಕ ಅವರು ಬಿ.ಹೆಚ್.ರಸ್ತೆ ದಾಟುತ್ತಿದ್ದಾಗ ಘಟನೆ ಸಂಭವಿಸಿದೆ. ಗಾಯಾಳುವನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟಿಟಿ ಚಾಲಕ ದರ್ಶಿತ ಎಂಬಾತನ ವಿರುದ್ಧ ಶಿವಮೊಗ್ಗ ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಕ್ರೆಬೈಲು ಸಮೀಪ ಕೆಟಿಎಂ ಬೈಕ್ ಅಪಘಾತ, ಓರ್ವ ಸಾವು
SHIMOGA : ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿ ಬದಿಯಲ್ಲಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಕ್ರೆಬೈಲು ಸಮೀಪ ಘಟನೆ ಸಂಭವಿಸಿದೆ. ಕೆಟಿಎಂ ಡ್ಯೂಕ್ ಬೈಕಿನಲ್ಲಿ ವೇಗವಾಗಿ ಬಂದಿದ್ದು, ಅಡ್ಡ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಿರಣ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಲೈಂಗಿಕ ಕಿರುಕುಳ ಆರೋಪ, ಸರ್ಕಾರಿ ಶಾಲೆಯ ಶಿಕ್ಷಕ, ಶಿಕ್ಷಕಿ ವಿರುದ್ಧ ಕೇಸ್, ಏನಿದು ಪ್ರಕರಣ?
ಬೈಕುಗಳ ಡಿಕ್ಕಿ, ಗಂಭೀರ ಗಾಯಗೊಂಡಿದ್ದ ಸವಾರ ಸಾವು
SORABA : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ದೇವರಾಜಗೌಡ (48) ಎಂಬುವವರು ತಮ್ಮ ಡಿಸ್ಕವರ್ ಬೈಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ಚಂದ್ರಗುತ್ತಿ ಕಡೆಗೆ ತೆರಳುತ್ತಿದ್ದ ಬೈಕ್ (bike accident) ವೇಗವಾಗಿ ಬಂದು ದೇವರಾಜಗೌಡ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ದೇವರಾಜಗೌಡ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ವಾಹನ ಡಿಕ್ಕಿಯಾಗಿ ಬಿದ್ದು ನರಳಾಡುತ್ತಿದ್ದ ಜಿಂಕೆಗೆ ನೆರವಾದ ಜನ, ಫೋಟೊಗಳು VIRAL


CLICK HERE TO JOIN SHIVAMOGGA LIVE WHATSAPP GROUP