ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 ಜುಲೈ 2021

ವಿದ್ಯುತ್ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲಿ ಮೃತಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ಗೊರಕೋಡು ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ಹೇಗಾಯ್ತು ಘಟನೆ?

ಬೆಜ್ಜವಳ್ಳಿಯಿಂದ ಕನ್ನಂಗಿ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್‍ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿರುವ ಸಾಧ್ಯತೆ ಇದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ರಸ್ತೆ ಪಕ್ಕಕ್ಕೆ ಬಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು.

ಮೃತರ ಗುರುತು ಪತ್ತೆಯಾಗಿಲ್ಲ. ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment