ಆಗರದಹಳ್ಳಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಗುದ್ದಿದ ಬೈಕ್‌ | ಭದ್ರಾವತಿಯಲ್ಲಿ ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಅಟ್ಯಾಕ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 15 MARCH 2024

‌ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್‌

HOLEHONNURU : ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಅಗರದಳ್ಳಿ ಕ್ಯಾಂಪ್‌ನಲ್ಲಿ ಕೂಲಿ ಕೆಲಸಕ್ಕೆ ಹೋಗಿ ಸಿದ್ದರ ಕಾಲೋನಿಯ ಮನೆಗೆ ಮರಳುತ್ತಿದ್ದ ನಾಗರಾಜಪ್ಪ ಅವರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಗರದಳ್ಳಿ ಕ್ಯಾಂಪ್‌ ಕಡೆಯಿಂದ ವೇಗವಾಗಿ ಬಂದ ಬೈಕ್‌ ಹಿಂಬದಿಯಿಂದ ನಾಗರಾಜಪ್ಪ ಅವರಿಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಕೂಡಲೆ ನಾಗರಾಜಪ್ಪ ಅವರನ್ನು ಹೊಳೆಹೊನ್ನೂರು ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್‌ ಸವಾರನ ವಿರುದ್ಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಅಟ್ಯಾಕ್

BHADRAVATHI : ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರರು ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಭದ್ರಾವತಿಯ ಅನ್ವರ್‌ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಲಾರಿಯು ಅನ್ವರ್‌ ಕಾಲೋನಿಯಿಂದ ಜಟ್‌ಪಟ್‌ ನಗರಕ್ಕೆ ತೆರಳುತ್ತಿತ್ತು. ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಕುಳಿತು ಬಂದ ಮೂವರು ಲಾರಿ ಚಕ್ರಕ್ಕೆ ಡಿಕ್ಕಿ ಹೊಡೆಸಿಕೊಂಡು ಕೆಳಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಅಪಘಾತದ ಹಿನ್ನೆಲೆ ಲಾರಿ ಚಾಲಕ ಗುಂಡಣ್ಣ ಮತ್ತು ಲಾರಿಯಲ್ಲಿದ್ದ ರಾಜು ಅವರ ಮೇಲೆ ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ. ಬೈಕ್‌ ಸವಾರರ ಜೊತೆಗೆ ಇನ್ನೂ ಕೆಲವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಲಾಟೆ ವಿಚಾರ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಹಲ್ಲೆಕೋರರು ಪರಾರಿಯಾಗಿದ್ದಾರೆ. ಓಲ್ಡ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌, ಎಫ್‌ಐಆರ್‌ನಲ್ಲಿ ಏನಿದೆ? ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ ಏನು?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment