ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 MARCH 2024
ಬಾವಿಗೆ ಬಿದ್ದ ಮಹಿಳೆ ರಕ್ಷಣೆ
HOSANGARA : ಮನೆ ಸಮೀಪದ ಬಾವಿಗೆ ಕಾಲು ಜಾರಿ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ನೆರವಿನೊಂದಿಗೆ ರಕ್ಷಣೆ ಮಾಡಿದ್ದಾರೆ. ಹೊಸನಗರ ತಾಲೂಕು ಕಲ್ಲುಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಾಗರತ್ನ (65) ಎಂಬುವವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದರು. ವಿಷಯ ತಿಳಿಯುತ್ತಿದ್ದಂತೆ ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮಹಿಳೆಯ ರಕ್ಷಣೆ ಮಾಡಿದರು. ಆಗ್ನಿಶಾಮಕ ದಳದ ಆನಂದಪ್ಪ, ರಾಜೇಶ್, ರವಿ, ಶಂಕರಗೌಡ, ಮಂಜುನಾಥ್, ರಾಮೀಜ್, ರಾಜಾಶೇಖ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು.
ನೀರು ತರುತ್ತಿದ್ದ ಮಹಿಳೆಗೆ ಟಿಪ್ಪರ್ ಡಿಕ್ಕಿ, ಸಾವು
ANANDAPURA : ನೀರು ತರುತ್ತಿದ್ದ ಮಹಿಳೆಗೆ ಟಿಪ್ಪರ್ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ಸಾಗರ ತಾಲೂಕು ಅಂದಾಸುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಶಿಲ್ಪಾ (38) ಮೃತ ದುರ್ದೈವಿ. ಜಂಬಿಟ್ಟಿಗೆ ಸಾಗಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಿಲ್ಪಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಓರ್ವ ಸಾವು
SORABA : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಓರ್ವ ಸವಾರ ಮೃತಪಟ್ಟಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಅನವಟ್ಟಿ ತಿಮ್ಮಾಪುರ ಬಡಾವಣೆಯ ಮನೋಜ್ (26) ಮೃತ ದುರ್ದೈವಿ, ಹಿಂಬದಿ ಸವಾರ ಅದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರೂ ಹೋಳಿ ಹುಣ್ಣಿಮೆ ಅಂಗವಾಗಿ ಚಂದ್ರಗುತ್ತಿ ರೇಣುಕಾಂಬಾ ದೇವಿ ದರ್ಶನಕ್ಕೆ ತೆರಳಿದ್ದರು. ನಂತರ ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗಿ ಹಿಂದಿರುಗುವಾಗ ಜಡೆ ಹೋಬಳಿ ಬದನಕಟ್ಟೆ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ. ಗಾಯಗೊಂಡ ಇಬ್ಬರನ್ನು ಅನವಟ್ಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಮನೋಜ್ ತೀವ್ರ ಗಾಯಗೊಂಡಿದ್ದರಿಂದ ಶಿವಮೊಗ್ಗ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಿಸಿಲ್ಲ.
ಇದನ್ನೂ ಓದಿ – ಶಿವಮೊಗ್ಗದ ಗಾಂಧಿ ಬಜಾರ್, ಹೊಸನಗರದ ತೋಟದ ಮನೆ ಮೇಲೆ ಬೆಂಗಳೂರು ಲೋಕಾಯುಕ್ತರಿಂದ ದಾಳಿ
LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





