ರಾತ್ರಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಮೂವರಿಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 DECEMBER 2023

SHIMOGA : ರಸ್ತೆ ಬದಿ ನಡೆದು ಹೋಗುತ್ತಿದ್ದವರಿಗೆ ಹಿಂಬದಿಯಿಂದ ಬಂದ ಬೈಕ್‌ ಒಂದು ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ಕಲ್ಲೂರು ಮಂಡ್ಲಿ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಉದಯ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಗೌರವ್‌, ಶಂಕರ್‌ ಜೆಟ್ಟಿ, ಗುರು ಪಾಟ್ಕರ್‌ ಗಾಯಗೊಂಡಿದ್ದಾರೆ. ಅಗಸವಳ್ಳಿಯಲ್ಲಿ ಸ್ನೇಹಿತರೊಬ್ಬರ ಮನೆಯಲ್ಲಿ ರಾತ್ರಿ ಊಟ ಮುಗಿಸಿಕೊಂಡು ತಮ್ಮ ರೂಂಗೆ ಮರಳುತ್ತಿದ್ದರು. ರಸ್ತೆಯಲ್ಲಿ ನಡೆದು ಬರುವಾಗ ಹಿಂಬದಿಯಿಂದ ಬಂದ ಬೈಕ್‌ ಡಿಕ್ಕಿ ಹೊಡೆದಿದೆ. ಮೂವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸಕ್ರೆಬೈಲು ಸಮೀಪ ಕೆಟಿಎಂ ಬೈಕ್‌ ಅಪಘಾತ, ಶಿವಮೊಗ್ಗದ ಕಾಲೇಜು ವಿದ್ಯಾರ್ಥಿನಿ ತಲೆಗೆ ಪೆಟ್ಟು

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment