ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 JANUARY 2024
SHIMOGA : ಸ್ನೇಹಿತರೊಂದಿಗೆ ಊಟ ಮುಗಿಸಿ ಸಕ್ರೆಬೈಲಿನಿಂದ ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತಕ್ಕೀಡಾಗಿ ಖಾಸಗಿ ಕಾಲೇಜು ಬಿ.ಕಾಂ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಸ್ತೆ ಬದಿ ಮರಕ್ಕೆ ಡಿಕ್ಕಿ
ಗೋಪಾಲಗೌಡ ಬಡಾವಣೆಯ ಪ್ರಜ್ವಲ್ (20) ಮೃತ ದುರ್ದೈವಿ. ಪವನ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಜ.19ರಂದು ಕಾಲೇಜು ಸ್ನೇಹಿತರೊಂದಿಗೆ ಪವನ್ ಸಕ್ರೆಬೈಲಿಗೆ ತೆರಳಿದ್ದ. ಊಟ ಮುಗಿಸಿ ಪ್ರಜ್ವಲ್ ತನ್ನ ಸ್ನೇಹಿತ ಪವನ್ ಜೊತೆಗೆ ಬೈಕ್ನಲ್ಲಿ ಶಿವಮೊಗ್ಗಕ್ಕೆ ಮರಳುತ್ತಿದ್ದರು. ಈ ಸಂದರ್ಭ ರಸ್ತೆ ಬದಿ ಮರಕ್ಕೆ ಬೈಕ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು ರಕ್ತ ಸ್ರಾವವಾಗಿದೆ. ಹಿಂಬದಿ ಕುಳಿತಿದ್ದ ಪವನ್ಗು ಗಂಭೀರ ಗಾಯವಾಗಿತ್ತು.
ಇದನ್ನೂ ಓದಿ – ಪದವಿ ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ನೇಣಿಗೆ ಶರಣು
ಕೂಡಲೆ ಇಬ್ಬರನ್ನು ಎನ್.ಹೆಚ್.ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಪ್ರಜ್ವಲ್ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಪವನ್ಗೆ ಚಿಕಿತ್ಸೆ ಮುಂದುವರೆದಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422