| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 1 MARCH 2023
SHIMOGA : ಬೈಕ್ ಅಡ್ಡಗಟ್ಟಿ ಸವಾರನ (Rider) ಮುಖಕ್ಕೆ ಹೊಡೆದು ಕಪ್ಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![]()
ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರ 2ನೇ ಅಡ್ಡರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೊರಿಯರ್ ಸರ್ವಿಸ್ ಕೆಲಸ ಮಾಡುತ್ತಿರುವ ಮಂಜುನಾಥ್ (28) ಎಂಬುವವರು ದೂರು ನೀಡಿದ್ದಾರೆ. ಆಜಾದ್ ನಗರದ 2ನೇ ತಿರುವಿನಲ್ಲಿ ಕೊರಿಯರ್ ಕೊಟ್ಟು ಬರುವಾಗ ಘಟನೆ ನಡೆದಿದೆ.
ಕಪ್ಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಮಂಜುನಾಥ್ ಚಲಿಸುತ್ತಿದ್ದ ಬೈಕಿಗೆ (Rider) ಅಡ್ಡ ಹಾಕಿದ್ದಾನೆ. ಬೈಕ್ ನಿಲ್ಲಿಸುತ್ತಿದ್ದಂತೆ ಮಂಜುನಾಥನ ಮುಖಕ್ಕೆ ಆತ ಹೊಡೆದು, ತಕ್ಷಣ ಅಲ್ಲಿಂದ ಓಡಿ ಹೋಗಿದ್ದಾನೆ. ಕೂಡಲೆ ಮಂಜುನಾಥ್ ತನ್ನ ಸ್ನೇಹಿತನಿಗೆ ಕರೆ ಮಾಡಿ ಸ್ಥಳಕ್ಕೆ ಕರೆಯಿಸಿಕೊಂಡಿದ್ದಾನೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಳಿಕ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾನೆ.
ಇದನ್ನೂ ಓದಿ – ಮಚ್ಚು ಹಿಡಿದು ಹುಚ್ಚಾಟ, ಅಂಗಡಿಯಲ್ಲಿ ವಸ್ತುಗಳು ಚಲ್ಲಾಪಿಲ್ಲಿ, ಕಾರಿನ ಗಾಜು ಪೀಸ್ ಪೀಸ್, ಒಬ್ಬನ ಮೇಲೆ ದಾಳಿ

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()