SHIMOGA NEWS, 29 OCTOBER 2024 : ನಂಬರ್ ಪ್ಲೇಟ್ ಇಲ್ಲದ ಬೈಕ್ (Bike) ಒಂದನ್ನು ತಡೆದು ತಪಾಸಣೆ ಮಾಡಿದಾಗ ಸಾಲು ಸಾಲು ನ್ಯೂನತೆ ಕಂಡು ಬಂದಿದೆ. ಬೈಕ್ ಚಲಾಯಿಸುತ್ತಿದ್ದಾತ ಮದ್ಯ ಸೇವಿಸಿರುವುದು ಬೆಳಕಿಗೆ ಬಂದಿದೆ. ನ್ಯಾಯಾಲಯವು ಬೈಕ್ ಸವಾರನಿಗೆ 14,500 ರೂ. ದಂಡ ವಿಧಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅ.27ರಂದು ನೆಹರು ರಸ್ತೆಯಲ್ಲಿ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್, ಸಿಬ್ಬಂದಿ ದಿನೇಶ್, ಹರೀಶ್ ವಾಹನಗಳ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುತ್ತಿದ್ದ ಬೈಕ್ ತಡೆದು ತಪಾಸಣೆ ಮಾಡಿದಾಗ ಸವಾರ ಮದ್ಯ ಸೇವಿಸಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ » ವೈರಲ್ ಆದ ದೆವ್ವ, ವಾರ್ನಿಂಗ್ ನೀಡಿದ ಶಿವಮೊಗ್ಗ ಪೊಲೀಸ್
ಬೈಕ್ ತಪಾಸಣೆ ಮಾಡಿದಾಗ ಎಮಿಷನ್ ಸರ್ಟಿಫಿಕೇಟ್ ಇರಲಿಲ್ಲ. ಸವಾರ ಹೆಲ್ಮೆಟ್ ಧರಿಸಿರಲಿಲ್ಲ. ಸೈಡ್ ಮಿರರ್, ನಂಬರ್ ಪ್ಲೇಟ್, ಫಿಟ್ನಸ್ ಸರ್ಟಿಫಿಕೇಟ್ ಕೂಡ ಇರಲಿಲ್ಲ. ಈ ಹಿನ್ನಲೆ ಸಂಚಾರ ಪೊಲೀಸರು ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 14,500 ರೂ. ದಂಡ ವಿಧಿಸಿದೆ.
ಇದನ್ನೂ ಓದಿ » ಸಾಲು ಸಾಲು ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ಮೂರು ಮೀಟರ್ ಉದ್ದದ ರಶೀದಿ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





