ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 FEBRUARY 2024
SHIMOGA : ನಗರದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರೆದಿದೆ. ಜನನಿಬಿಡ ಪ್ರದೇಶದಲ್ಲಿಯು ಸುಲಭವಾಗಿ ಬೈಕ್ ಕಳ್ಳತನ ಮಾಡುತ್ತಿದ್ದಾರೆ.
ಹೆಚ್ಪಿಸಿ ಚಿತ್ರಮಂದಿರ ಬಳಿ ಕಳವು
ಪರಮೇಶ್ ಎಂಬುವವರು ತಮ್ಮ ಸಿಟಿ 100 ಬೈಕ್ ಅನ್ನು ಬಾಲರಾಜ ಅರಸ್ ರಸ್ತೆಯಲ್ಲಿ ಹೆಚ್ಪಿಸಿ ಚಿತ್ರಮಂದಿರ ಬಳಿ ನಿಲ್ಲಿಸಿದ್ದರು. ಪಕ್ಕದಲ್ಲಿರುವ ವೈನ್ ಶಾಪ್ನಲ್ಲಿ ಕೆಲಸ ಮುಗಿಸಿ ರಾತ್ರಿ 10.30ಕ್ಕೆ ಪಾರ್ಕಿಂಗ್ ಸ್ಥಳಕ್ಕೆ ಬಂದಾಗ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಿದ ಬಳಿಕ ಅವರು ಜಯನಗರ ಠಾಣೆಗೆ ದೂರು ನೀಡಿದ್ದಾರೆ.
ದುರ್ಗಿಗುಡಿಯಲ್ಲಿ ಬೈಕ್ ನಾಪತ್ತೆ
ಸುಬ್ರಹ್ಮಣ್ಯ ಕುಮಾರ್ ಎಂಬುವವರು ತಮ್ಮ ಟಿವಿಎಸ್ ವಿಕ್ಟರ್ ಬೈಕ್ ಅನ್ನು ದುರ್ಗಿಗುಡಿಯ ಪಾರ್ಕ್ ಬಡಾವಣೆ ರಸ್ತೆಯಲ್ಲಿ ನಿಲ್ಲಿಸಿ ಗ್ಯಾಸ್ ಏಜೆನ್ಸಿಗೆ ತೆರಳಿದ್ದರು. ಮರಳಿ ಬಂದಾಗ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಇರಲಿಲ್ಲ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಹೊಳೆ ಬಸ್ ನಿಲ್ದಾಣದ ಬಳಿ ರೈತನ ಮೇಲೆ ಬ್ಲೇಡ್ನಿಂದ ದಾಳಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422