ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021
ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಯ ಆರೈಕೆಗೆ ಬಂದಿದ್ದವರ ಬೈಕ್ ನಾಪತ್ತೆಯಾಗಿದೆ. ಆಸ್ಪತ್ರೆ ಆವರಣದ ಪಾರ್ಕಿಂಗ್ ಜಾಗದಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಬೈಕನ್ನು ಕಳುವು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ | ವಿನೋಬನಗರದ 60 ಅಡಿ ರಸ್ತೆಯಲ್ಲಿ ಪಲ್ಸರ್ NS ಬೈಕ್ ನಾಪತ್ತೆ, ರಾತ್ರಿ ನಿಲ್ಲಿಸಿದ್ದು ಮಧ್ಯರಾತ್ರಿಯೊಳಗೆ ಮಿಸ್ಸಿಂಗ್
ವೀರಾಪುರದ ಸುರೇಶ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಸುರೇಶ್ ಅವರ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನೋಡಿಕೊಳ್ಳಲು ಮೆಗ್ಗಾನ್ ಆಸ್ಪತ್ರೆಗೆ ಬಂದಿದ್ದ ಸುರೇಶ್ ಅವರು, ಪಾರ್ಕಿಂಗ್ನಲ್ಲಿ ಬೈಕ್ ನಿಲ್ಲಿಸಿದ್ದರು.
ಇದನ್ನೂ ಓದಿ | ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗ್ಗೆ ನಾಪತ್ತೆ
ರಾತ್ರಿ ಬಂದಾಗ ಪಾರ್ಕಿಂಗ್ ಜಾಗದಲ್ಲಿ ಬೈಕ್ ಇರಲಿಲ್ಲ. ಗಾಬರಿಯಿಂದ ಎಲ್ಲೆಡೆ ಹುಡುಕಾಡಿದ ಸುರೇಶ್ ಬೈಕ್ ಸಿಗದೆ ಬರಿಗೈಯಲ್ಲಿ ಮನೆಗೆ ಮರಳಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200