SHIMOGA NEWS, 26 SEPTEMBER 2024 : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ (Bike) ಕಳ್ಳತನವಾಗಿದೆ. ಇನ್ನೊಂದೆಡೆ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕದ್ದೊಯ್ದಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕೃಷಿ ನಗರದ ನಿವಾಸಿ ಸತೀಶ್ ಕುಮಾರ್ ಎಂಬುವವರು ತಮ್ಮ ಪಲ್ಸರ್ ಬೈಕ್ ಅನ್ನು ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಮಂಗಳೂರಿಗೆ ಹೋಗಿ ಹಿಂತಿರುಗಿದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದರೂ ಬೈಕ್ ಸಿಗಲಿಲ್ಲ. ಈ ಹಿನ್ನೆಲೆ ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.» ಮಂಗಳೂರಿನಿಂದ ಹಿಂತಿರುಗಿದಾಗ ಶಾಕ್
ಮಾರ್ನಮಿ ಬೈಲ್‌ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಹಾಡಹಗಲೆ ಕಳವು ಮಾಡಲಾಗಿದೆ. ಇಲ್ಲಿನ ಅಶ್ವಾಕ್ ಅಹಮದ್ ಅವರು ತಮ್ಮ ಜಮೀನಿಗೆ ಹೋಗಿ ಬೆಳಗ್ಗೆ 10 ಗಂಟೆ ಹೊತ್ತಿಗೆ ಮನೆಗೆ ಮರಳಿದ್ದರು. ಮನೆ ಮುಂದೆ ಹೋಂಡಾ ಆಕ್ಟೀವಾ ಬೈಕ್ ನಿಲ್ಲಿಸಿ ಒಳಗೆ ಹೋಗಿದ್ದರು. ಅರ್ಧ ಗಂಟೆ ಬಳಿಕ ಗಮನಿಸಿದಾಗ ಹೋಂಡಾ ಆಕ್ಟೀವಾ ಮನೆ ಮುಂದೆ ಇರಲಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.» ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳವು
ಇದನ್ನೂ ಓದಿ » ರಾತ್ರೋರಾತ್ರಿ ನೂರಾರು ಅಡಿಕೆ ಮರಗಳಿಗೆ ಗರಗಸ ಹಾಕಿದ ದುಷ್ಕರ್ಮಿಗಳು
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






