ಶಿವಮೊಗ್ಗ ಲೈವ್.ಕಾಂ | BHADRAVATHI NEWS | 2 ಸೆಪ್ಟಂಬರ್ 2020
ಭದ್ರಾವತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾಗಿತ್ತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಾಲ್ಕೆ ದಿನದಲ್ಲಿ ಅರೆಸ್ಟ್
ಭದ್ರಾವತಿ ಅನ್ವರ್ ಕಾಲೋನಿಯಲ್ಲಿ ರಾತ್ರಿ ವೇಳೆ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಶೆಟ್ಟಿಹಳ್ಳಿ ಗ್ರಾಮದ ವಾಸುಭೋವಿ ಅಲಿಯಾಸ್ ಕೋಳಿ ಮಂಜ (33) ಎಂಬಾತನನ್ನು ಬಂಧಿಸಲಾಗಿದೆ.
ಎರಡು ಬೈಕ್ ಸೀಜ್
ಕೋಳಿ ಮಂಜನಿಂದ ಎರಡು ಬೈಕ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಅನ್ವರ್ ಕಾಲೋನಿಯಲ್ಲಿ ಕಳ್ಳತನ ಮಾಡಿದ್ದ ಬೈಕು ಮತ್ತು ಹಾಸನ ಜಿಲ್ಲೆ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಮತ್ತೊಂದು ಬೈಕನ್ನು ಸೀಜ್ ಮಾಡಲಾಗಿದೆ. ಇವುಗಳ ಮೌಲ್ಯ 27 ಸಾವಿರ ಎಂದು ಅಂದಾಜು ಮಾಡಲಾಗಿದೆ.
ಭದ್ರಾವತಿ ಡಿವೈಎಸ್‍ಪಿ ಸುಧಾಕರ್ ನಾಯಕ್ ಮಾರ್ಗದರ್ಶನದಲ್ಲಿ, ಭದ್ರಾವತಿ ನಗರ ಸರ್ಕಲ್ ಇನ್ಸ್‍ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಹಳೆನಗರ ಠಾಣೆ ಪಿಎಸ್ಐ ಶ್ರೀನಿವಾಸ್ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]