ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 ಆಗಸ್ಟ್ 2021
ಬೈಕ್ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕೂಬಾ ಮಸೀದಿ ಬಳಿ ಬೈಕ್ ಕಳವಾಗಿದ್ದ ಸಂಬಂಧ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಯುವಕ ಸಿಕ್ಕಿಬಿದ್ದಿದ್ದಾನೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭದ್ರಾವತಿ ಇಂದಿರಾ ನಗರದ ಮಹಮ್ಮದ್ ಹರ್ಷದ್ (22) ಬಂಧಿತ. ಆಗಸ್ಟ್ 18ರಂದು ಮಸೀದಿ ಬಳಿ ಸೈಯದ್ ಮುಸ್ತಫಾ ಎಂಬುವವರ ಬೈಕ್ ಕಳ್ಳತನ ಮಾಡಿದ್ದ. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹಮ್ಮದ್ ಹರ್ಷದ್ ಸಿಕ್ಕಿಬಿದ್ದಿದ್ದಾನೆ.
ಆರೋಪಿಯಿಂದ ಮೂರು ಬೈಕ್’ಗಳನ್ನು ವಶಕ್ಕೆ ಪಡೆಯಲಾಗಿದೆ. ಈತನ ವಿರುದ್ಧ ಹಳೇನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು, ಈತನ ವಿರುದ್ಧ ನ್ಯೂಟೌನ್ ಮತ್ತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಪ್ರಕರಣಗಳು ದಾಖಲಾಗಿವೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200