ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 6 AUGUST 2024 : ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಹಣ ಪಡೆದು ಹಿಂತಿರುಗಿಸದ ಹಿನ್ನೆಲೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಶರತ್ ಕಲ್ಯಾಣಿ ವಿರುದ್ಧ ಮಹಿಳೆಯೊಬ್ಬರು ದೂರು (Arrest) ನೀಡಿದ್ದರು. ಈ ಹಿನ್ನೆಲೆ ಶಿವಮೊಗ್ಗ ಪೊಲೀಸರು ವಿಜಯಪುರದಲ್ಲಿ ಶರತ್ ಕಲ್ಯಾಣಿಯನ್ನು ಬಂಧಿಸಿದ್ದಾರೆ.
ಮಹಿಳೆ ನೀಡಿದ ದೂರಿನಲ್ಲಿ ಏನಿದೆ?
‘ಫೇಸ್‌ಬುಕ್‌ನಲ್ಲಿ ಶರತ್ ಕಲ್ಯಾಣಿ ತನ್ನನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದು, ಹಣವನ್ನು ಕೂಡ ಪಡೆದಿದ್ದ. ಹಣ ಹಿಂತಿರುಗಿಸುವಂತೆ ಕೇಳಿದಾಗ ಸಂಪರ್ಕ ಬಿಟ್ಟಿದ್ದ. ಹಾಗಾಗಿ ಶರತ್ ಕಲ್ಯಾಣಿಯ ಮನೆಗೆ ಹೋದಾಗ ಆತನಿಗೆ ಮದುವೆಯಾಗಿರುವುದು ಗೊತ್ತಾಯಿತು. ಈ ಸಂದರ್ಭ ತನ್ನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಒಡ್ಡಿದ್ದಾನೆ’ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು.
ಪ್ರಕರಣ ದಾಖಲು ಮಾಡಿಕೊಂಡಿದ್ದ ಮಹಿಳಾ ಠಾಣೆ ಪೊಲೀಸರು ಶರತ್ ಕಲ್ಯಾಣಿಯನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ.
ಇದನ್ನೂ ಓದಿ ⇓
ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್ ಬೆಂಕಿ, ಕ್ಷಣ ಹೊತ್ತಲ್ಲೇ ಧಗಧಗ ಹೊತ್ತಿ ಉರಿದ ವಾಯುವ್ಯ ಸಾರಿಗೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422