ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮಕ್ಕಳ ಆಟಕ್ಕಾಗಿ ಕಟ್ಟಿದ್ದ ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡ ಪರಿಣಾಮ ಬಾಲಕನೊಬ್ಬ ಉಸಿರುಗಟ್ಟಿ ಮೃತಪಟ್ಟಿದ್ದಾನೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕಿಶೋರ್ (13) ಮೃತ ಬಾಲಕ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ.
ಕಿಶೋರ್, ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದವನು. ಹಾಡೋನಹಳ್ಳಿಯ ದೊಡ್ಡಮ್ಮ ಜಯಮ್ಮ ಎಂಬುವರ ಮನೆಯಲ್ಲಿದ್ದುಕೊಂಡು ಕಿಶೋರ್ ವಿದ್ಯಾಭ್ಯಾಸ ಮಾಡುತ್ತಿದ್ದ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಣ್ಣ ಮಗುವಿಗಾಗಿ ಕಟ್ಟಿದ ಸೀರೆಯಲ್ಲಿ ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಸೀರೆ ಸುತ್ತಿಕೊಂಡಿತು ಎನ್ನಲಾಗಿದೆ. ದೊಡ್ಡೇರಿಯ ನಿಂಗಪ್ಪ-ಗೀತಮ್ಮ ದಂಪತಿಯ ಕಿರಿಯ ಪುತ್ರ ಈತನಾಗಿದ್ದು ಹಾಡೋನಹಳ್ಳಿಯ ಶ್ರೀ ವೆಂಕಟೇಶ್ವರ ವಿದ್ಯಾಸಂಸ್ಥೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200