ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021
ಆಟವಾಡುತ್ತಿದ್ದ ಬಾಲಕನಿಗೆ ಜೋಕಾಲಿಯೇ ಉರುಳಾಗಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಶಿವಮೊಗ್ಗದ ಜಯನಗರದಲ್ಲಿ ಘಟನೆ ಸಂಭವಿಸಿದೆ.
ಭರತ್ (12) ಮೃತ ದುರ್ದೈವಿ. ಸೀರೆಯಿಂದ ಕಟ್ಟಿದ ಜೋಕಾಲಿ ಕುತ್ತಿಗೆಗೆ ಬಿಗಿದುಕೊಂಡಿದ್ದು, ಭರತ್ ಕೊನೆಯುಸಿರೆಳೆದಿದ್ದಾನೆ.
ಹೇಗಾಯ್ತು ಘಟನೆ?
ಹಲ್ಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಭರತ ತನ್ನ ತಾಯಿಯೊಂದಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ. ಜಯನಗರದಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮನೆಯ ಕೊಠಡಿಯಲ್ಲಿ ಸೀರೆಯಿಂದ ಕಟ್ಟಿದ್ದ ಜೋಕಾಲಿಯಲ್ಲಿ ಭರತ್ ಆಟವಾಡುತ್ತಿದ್ದ.
ಸಮೀಪದಲ್ಲೇ ಇದ್ದ ಮತ್ತೊಬ್ಬ ಸಂಬಂಧಿಕರ ಮನೆಗೆ ಭರತನ ತಾಯಿ ತೆರಳಿದ್ದರು. ಹಿಂತಿರುಗಿದಾಗ ಕೊಠಡಿಯಲ್ಲಿ ಭರತ ಮಂಡಿಯೂರಿ ಕೂತಂತೆ ಕಂಡಿತು. ಪರಿಶೀಲಿಸಿದಾಗ ಭರತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ಕೂಡಲೆ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಶೀಲಿಸಿದ ವೈದ್ಯರು ಭರತ್ ಮೃತನಾಗಿರುವುದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422