ಶಿವಮೊಗ್ಗ : ರೈಲ್ವೆ ನಿಲ್ದಾಣದ ಮುಂಭಾಗ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಬ್ರೇಸ್‌ಲೆಟ್ (Bracelet) ದರೋಡೆ ಮಾಡಿಕೊಂಡು ಪರಾರಿಯಾಗಿದ್ದ ನಾಲ್ವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಚಿನ್ನದ ಬ್ರೇಸ್‌ಲೆಟ್ ಮತ್ತು ಕೃತ್ಯಕ್ಕೆ ಬಳಸಿದ್ದ ಆಟೋ ವಶಕ್ಕೆ ಪಡೆದಿದ್ದಾರೆ.
ಕೃಷಿ ನಗರದ ಜಯದೇವಪ್ಪ ಎಂಬುವವರ ಕೈಯಲ್ಲಿದ್ದ ಬ್ರೇಸ್‌ಲೆಟ್ ದರೋಡೆಯಾಗಿತ್ತು. ಈ ಸಂಬಂಧ ಜಬೀರ್.ಜೆ, ಮೊಹಮ್ಮದ್ ಸಮೀವುಲ್ಲಾ, ಆಂಜನೇಯ ಮತ್ತು ಸೈಯದ್ ನೇಮನ್ ಬಂಧಿಸಲಾಗಿದೆ.
ರೈಲ್ವೆ ನಿಲ್ದಾಣದ ಮುಂದೆ ಆಗಿದ್ದೇನು?
ಜಯದೇವಪ್ಪ ತಮ್ಮ ಸ್ನೇಹಿತರೊಂದಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ಮರಳುವಾಗ ಸ್ನೇಹಿತರೊಬ್ಬರನ್ನು ಮಾತನಾಡಿಸಲು ರಾತ್ರಿ 11.30ರ ಹೊತ್ತಿಗೆ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ತೆರಳಿದ್ದರು. ಆದರೆ ಆ ಹೊತ್ತಿಗಾಗಲೆ ರೈಲು ಹೊರಟಿತ್ತು. ನಿಲ್ದಾಣದ ಹೊರಗೆ ಬಂದು ತಮ್ಮ ಸ್ಕೂಟರ್ ಹತ್ತುವಾಗ ನಾಲ್ವರು ಅಪರಿಚಿತರು ಜಯದೇವಪ್ಪ ಅವರನ್ನು ಅಡ್ಡ ಹಾಕಿ, ಅವರ ಕೈಯಲ್ಲಿದ್ದ ಚಿನ್ನದ ಬ್ರೇಸ್‌ಲೆಟ್ ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು.

1.23 ಲಕ್ಷ ರೂ. ಮೌಲ್ಯದ ಚಿನ್ನದ ಬ್ರೇಸ್‌ಲೆಟ್ ಕಳ್ಳತನವಾಗಿದೆ ಎಂದು ಆರೋಪಿಸಿ ಜಯದೇವಪ್ಪ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ | ಮುದಸ್ಸಿರ್ ಅಹ್ಮದ್‌ಗೆ ಪ್ರಶಸ್ತಿ ಪ್ರದಾನ | ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200