BREAKING NEWS – ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಬರ್ಬರ ಕೊಲೆ

SHIVAMOGGA LIVE NEWS, 12 JANUARY 2025

ಶಿವಮೊಗ್ಗ : ಅಣ್ಣನಿಂದಲೇ ತಮ್ಮನ (BROTHER) ಬರ್ಬರ ಹತ್ಯೆಯಾಗಿದೆ. ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಇಂದು ಬೆಳಗ್ಗೆ ಘಟನೆಯಾಗಿದೆ. ಗಿರೀಶ್‌ ನಾಯ್ಕ (30) ಮೃತನು.

ಇಲ್ಲಿನ ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Anupinkatte-incident-police-visit-the-spot.

ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ » ಖ್ಯಾತ ಛಾಯಾಗ್ರಾಹಕ ಶಿವಮೊಗ್ಗ ನಂದನ್ ವಿಧಿವಶ

Anupinkatte-incident-police-visit-the-spot.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment