ಶಿವಮೊಗ್ಗ: ರೈಲ್ವೆ ನಿಲ್ದಾಣದ ಸಮೀಪದ ಅಮೀರ್ ಅಹಮದ್ ಕಾಲೋನಿಯ (AA Colony) ಮುಖ್ಯರಸ್ತೆಯಲ್ಲಿರುವ ಬಾಡಿಗೆ ಮನೆಯೊಂದರ ಬೀಗ ಮುರಿದ (burglary) ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದ ಐಎಎಸ್ ಅಧಿಕಾರಿ ಹೆಸರಿನಲ್ಲಿ ವಂಚಿಸಲು ಯತ್ನ, ದಾಖಲಾಯ್ತು ಪ್ರಕರಣ

ಗುತ್ತಿಗೆದಾರ ಅರುಣ್ ಎಂಬುವವರ ಮನೆಯಲ್ಲಿ ಘಟನೆ ನಡೆದಿದೆ. ಅರುಣ್ ಅವರು ಏಪ್ರಿಲ್ 12ರಂದು ಕುಟುಂಬದೊಂದಿಗೆ ಹಾನಗಲ್‌ಗೆ ತೆರಳಿದ್ದರು. ಏಪ್ರಿಲ್ 16ರ ರಾತ್ರಿ ಮನೆಗೆ ವಾಪಸ್ ಬಂದಾಗ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ. ಮನೆಯ ಒಳಗಿದ್ದ ಬೀರುವಿನ ಲಾಕ್ ಮುರಿದ ಕಳ್ಳರು ಅದರಲ್ಲಿದ್ದ 20 ಗ್ರಾಂ ಬಂಗಾರದ ಆಭರಣಗಳು, ₹25,000 ನಗದು ಹಾಗೂ ಹಿತ್ತಾಳೆಯ ದೇವರ ವಿಗ್ರಹಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದರೆ.

ಒಟ್ಟು ₹3,07,700 ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
