ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 29 ಸೆಪ್ಟೆಂಬರ್ 2021
ಕಾಡಿನ ಮಧ್ಯೆ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಸ್ವಿಫ್ಟ್ ಕಾರು ಪತ್ತೆಯಾಗಿದೆ. ಚಾಲಕನ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿಯು ಭಸ್ಮವಾಗಿದ್ದು, ಅಸ್ಥಿ ಪಂಜರ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ತಾಲೂಕು ಆರಗ ಗ್ರಾಮ ಪಂಚಾಯಿತಿಯ ಮಿಟ್ಲಗೋಡು – ಹುಣಸೇಕೊಪ್ಪ ಕಾಡಿನಲ್ಲಿ ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿದೆ. ಮೇಲ್ನೋಟಕ್ಕೆ ಕೊಲೆ ಶಂಕೆ ವ್ಯಕ್ತವಾಗಿದೆ.
ಕಾರು ಪತ್ತೆಯಾಗಿದ್ದು ಹೇಗೆ?
ಸ್ಥಳೀಯರು ಕಟ್ಟಿಗೆ ತರಲು ಕಾಡಿಗೆ ಹೋಗಿದ್ದಾರೆ. ಆಗ ಸುಟ್ಟ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದೆ. ಸಮೀಪಕ್ಕೆ ಹೋಗಿ ನೋಡಿದಾಗ ಅಸ್ಥಿ ಪಂಜರ ಇರುವುದು ಗೊತ್ತಾಗಿದೆ. ಕೂಡಲೆ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.
ವಾಹನ ಓಡಾಡೋಕೆ ರಸ್ತೆಯಿಲ್ಲ
ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದು ವಾಹನಗಳು ಓಡಾಡಲು ಜಾಗವಲ್ಲ. ಅಲ್ಲಿಗೆ ರಸ್ತೆಯೂ ಇಲ್ಲ. ಹಾಗಾಗಿ ಕೊಲೆ ಉದ್ದೇಶದಿಂದಲೇ ವಾಹನ ಸಹಿತ ವ್ಯಕ್ತಿಯನ್ನು ದಹಿಸಲಾಗಿದೆ ಎಂದು ಶಂಕಿಸಲಾಗಿದೆ. ಕಾರಿನ ನಂಬರ್ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ.
ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀರ್ಥಹಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200