ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA NEWS | 9 MARCH 2021
ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಒಂದು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿಗೆ ಗಾಯವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ದೇವರ ದರ್ಶನ ಮುಗಿಸಿ ಬರುತ್ತಿದ್ದರು
ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ಇವತ್ತು ಬೆಳಗ್ಗೆ ಹಿಂತಿರುಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಇದನ್ನೂ ಓದಿ | ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ
ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಪಲ್ಟಿಯಾಗಿದ್ದ ಬಸ್ಸನ್ನು ಮೇಲೆತ್ತಲಾಗಿದೆ. ಕಾರ್ಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]