ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 2 AUGUST 2023
SAGARA : ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ (Electric Pole) ಡಿಕ್ಕಿ ಹೊಡೆದು ವಿದ್ಯುತ್ ತಂತಿ ಬಸ್ ಮೇಲೆ ಬಿದ್ದಿದೆ. ಬಸ್ ಪ್ರಯಾಣಿಕರಿಗೆ ವಿದ್ಯುತ್ ಶಾಕ್ನ ಅನುಭವವಾಗಿದೆ ಎಂದು ತಿಳಿದು ಬಂದಿದೆ.
ಸಾಗರ ತಾಲೂಕು ಗೆಣಸಿನಕುಣಿ ಬಳಿ ಘಟನೆ ಸಂಭವಿಸಿದೆ. ಸಿಗಂದೂರು ಕಡೆಯಿಂದ ಸಾಗರಕ್ಕೆ ಬರುವ ಬಸ್ ವಿದ್ಯುತ್ ಕಂಬಕ್ಕೆ (Electric Pole) ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ತುಂಡಾಗಿ ವಯರ್ ಬಸ್ ಮೇಲೆ ಬಿದ್ದಿದೆ ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ – 25 ಕೆ.ಜಿ ಅಕ್ಕಿ, 5 ಕೆ.ಜಿ ಟೊಮೆಟೊ, ದಿನಸಿ ಪೂರೈಸುವಂತೆ ಪ್ರಾಂಶುಪಾಲರಿಗೆ ಅತಿಥಿ ಉಪನ್ಯಾಸಕರ ಮನವಿ, ಕಾರಣವೇನು?
ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿತ್ತು. ಗಾನವಿ ಎಂಬ ವಿದ್ಯಾರ್ಥಿನಿ ಪ್ರಜ್ಞೆ ಕಳೆದುಕೊಂಡಿದ್ದಳು. ಆಕೆಯನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಗಾನವಿ ಸೇರಿದಂತೆ ಇಬ್ಬರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422