ಶಿವಮೊಗ್ಗದ ಲೈವ್.ಕಾಂ | SHIMOGA NEWS | 30 ಡಿಸೆಂಬರ್ 2021
ಮಂಡಗದ್ದೆ ಸಮೀಪ ಬಸ್ ಮತ್ತು ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಂಡಗದ್ದೆ – ಸಕ್ರೆಬೈಲು ನಡುವೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳುತಿತ್ತು. ಕ್ಯಾಂಟರ್ ವಾಹನ ಅಡಕೆ ತುಂಬಿಕೊಂಡು ಶಿವಮೊಗ್ಗದ ಕಡೆಗೆ ಬರುತ್ತಿತು
ಬಸ್ ಪ್ರಯಾಣಿಕರಿಗೆ ಗಾಯ
ಘಟನೆಯಲ್ಲಿ ಬಸ್ಸಿನಲ್ಲಿದ್ದ ಸುಮಾರು ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ. ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮಣಿಪಾಲದ ಅಸ್ಪತ್ರೆಗೆ ಕರೆದೊಯ್ಯಲಾಗಿದೆ.
ಲಾರಿ, ಬಸ್ ಮುಂಭಾಗ ಜಖಂ
ಅಪಘಾತದ ತೀವ್ರತೆಗೆ ಲಾರಿ ಮತ್ತು ಬಸ್ಸಿನ ಗಾಜು ಪುಡಿ ಪುಡಿಯಾಗಿವೆ. ಬಸ್ಸಿನ ಮುಂಭಾಗ ಜಖಂ ಆಗಿದೆ. ಲಾರಿಯ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.