ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
JOG FALLS, 19 AUGUST 2024 : ಜೋಗ ಜಲಪಾತ (Jog Falls) ಪ್ರದೇಶದಲ್ಲಿ ಬಸ್‌ನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನೋರ್ವ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರ ಗಾಯಗೊಂಡಿದ್ದಾನೆ. ಜೋಗ ನಿವಾಸಿ ಅಭಿಷೇಕ್ (24) ಗಾಯಗೊಂಡವ.
ಬಸ್ಸಿನ ಬಾಗಿಲ ಬಳಿ ನಿಂತಿದ್ದ ಅಭಿಷೇಕ್ ಬ್ರೆಕ್ ಹಾಕಿದ ತಕ್ಷಣ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಬಿದ್ದಾಗ ಈತನ ಕೈ ಮತ್ತು ಕಾಲಿನ ಮೇಲೆ ಚಕ್ರ ಹರಿದಿದೆ. ಕೂಡಲೇ ಯುವಕನನ್ನು ಕಾರ್ಗಲ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ ⇒ ದಿನ ಭವಿಷ್ಯ | 19 ಆಗಸ್ಟ್ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?






