ಇನ್‌ಸ್ಟಾಗ್ರಾಂನಲ್ಲಿ ಒಂದು ಕ್ಲಿಕ್‌ ಮಾಡಿದ ಶಿವಮೊಗ್ಗದ ಉದ್ಯಮಿಗೆ ಕಾದಿತ್ತು ಬಿಗ್‌ ಶಾಕ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 MARCH 2024

SHIMOGA : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ 52 ಲಕ್ಷ ರೂ. ವಂಚಿಸಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಜಾಹೀರಾತು ಗಮನಿಸಿ ಉದ್ಯಮಿ ಹಣ ಹೂಡಿಕೆ ಮಾಡಿದ್ದರು.

ಇನ್‌ಸ್ಟಾಗ್ರಾಂನಲ್ಲಿದ್ದ ಲಿಂಕ್‌ ಕ್ಲಿಕ್‌ ಮಾಡುತ್ತಿದ್ದಂತೆ ಉದ್ಯಮಿ ವಾಟ್ಸಪ್‌ ಗ್ರೂಪ್‌ ಒಂದಕ್ಕೆ ಸೇರಿದ್ದರು. ವಾಟ್ಸಪ್‌ನಲ್ಲಿ ಸೂಚಿಸಿದಂತೆ ಆಪ್‌ ಡೌನ್‌ಲೋಡ್‌ ಮಾಡಿಕೊಂಡ ಉದ್ಯಮಿ ಹಂತ ಹಂತವಾಗಿ 52.60 ಲಕ್ಷ ರೂ. ಹೂಡಿಕೆ ಮಾಡಿದ್ದರು. ಆಪ್‌ನಿಂದ ಹಣವನ್ನು ತಮ್ಮ ಬ್ಯಾಂಕ್‌ ಖಾತೆಗೆ ವರ್ಗಾಯಿಸಲು ಯತ್ನಿಸಿದಾಗ ಸದ್ಯವಾಗಲಿಲ್ಲ. ವಂಚನೆಗೊಳಗಾದ ಅರಿವಾಗುತ್ತಿದ್ದಂತೆ ಉದ್ಯಮಿ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ, ಗಾಂಧಿ ಬಜಾರ್‌ನಲ್ಲಿ ಚಪ್ಪರ ಶಾಸ್ತ್ರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment