ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 JANUARY 2023
SHIMOGA : ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ (business man) ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ (business man) ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೇಗಾಯ್ತು ಘಟನೆ?
ರಾತ್ರಿ ಭೂಪಾಳಂ ನಿವಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯುವ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು. ಆದರೆ ಉದ್ಯಮಿ ಶರತ್ ಅವರು ಒಳಗೆ ಸಿಲುಕಿ ಅಸ್ವಸ್ಥರಾಗಿದ್ದರು ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿ ದೌಡು
ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ. ಉದ್ಯಮಿ ಶರತ್ ಭೂಪಾಳಂ ಮತ್ತು ಅವರ ಮಗನ ರಕ್ಷಣೆ ಮಾಡಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಶರತ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಮಾಲೀಕಳಿಗಾಗಿ ಆಸ್ಪತ್ರೆ ಬಾಗಿಲಲ್ಲೇ ಕಾದು ಕುಳಿತ ನಾಯಿ, ಇದು ರಿಯಲ್ ಚಾರ್ಲಿ ಕಥೆ