ಶಿವಮೊಗ್ಗದ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಮೃತದೇಹ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಸಾಲದ ಬಾಧೆ ಹಿನ್ನೆಲೆ ಕ್ರಷರ್ ಉದ್ಯಮಿಯೊಬ್ಬರು ಹೊಟೇಲ್ ಲಾಡ್ಜ್‌ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಪಾಳ ಬಡಾವಣೆ ನಿವಾಸಿ, ಕ್ರಷರ್ ಉದ್ಯಮಿ ನವೀನ್ ಕುಮಾರ್ ಬಳಗಾರ್‌ (42) ಆತ್ಮಹತ್ಯೆ ಮಾಡಿಕೊಂಡವರು. ಕೆಲವು ವರ್ಷಗಳಿಂದ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಇದರಿಂದ ಮನವೊಂದು ಆತ್ಮಹತ್ಯೆಯ ಹಾದಿ ಹಿಡಿದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ನಗರದ ಹೊಟೇಲೊಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದಿದ್ದ ನವೀನ್ ಕುಮಾರ್, ಅಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Quarry-owner-ends-life-in-Shimoga-lodge