ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 18 ಏಪ್ರಿಲ್ 2019
ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿಕೊಡುವಂತೆ ಕುಟುಂಬದವರು ಪೊಲೀಸರ ಮೊರೆ ಹೋಗಿದ್ದಾರೆ.
ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಯುಸುಫ್ ಖಾನ್ ನಾಪತ್ತೆಯಾದ್ದಾರೆ. ನಿನ್ನೆ ಬೆಳಗಿನ ಜಾವ ಮನೆಯಿಂದ ತೆರಳಿರುವ ಯುಸುಫ್ ಖಾನ್, ಹಿಂತಿರುಗಿಲ್ಲ. ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಆತಂಕಕ್ಕೀಡಾಗಿರುವ ಕುಟುಂಬದವರು ದೂರು ನೀಡಿದ್ದಾರೆ.
ಯುಸುಫ್ ಮನೆಗೆ ಎಸ್.ಪಿ ಭೇಟಿ
ಇನ್ನು, ಲೋಕಸಭೆ ಚುನಾವಣೆಯ ಅಭ್ಯರ್ಥಿ ನಾಪತ್ತೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ, ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ ಸೇರಿದಂತೆ ಹಿರಿಯ ಅಧಿಕಾರಿಗಳು, ಸೂಳೆಬೈಲಿನಲ್ಲಿರುವ ಯುಸುಫ್ ಖಾನ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಪಡೆದುಕೊಂಡರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಡಾ.ಅಶ್ವಿನಿ, ಎರಡು ಗಂಟೆ ಹೊತ್ತಿಗೆ ಮನೆ ಬಿಟ್ಟಿದ್ದಾರೆ. ಇನ್ನೂ ಪತ್ತೆಯಾಗಿಲ್ಲ. ಅವರು ನಾಪತ್ತೆಯಾಗಿರುವ ಕುರಿತು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ಐದೇ ನಿಮಿಷದಲ್ಲಿ ಬರ್ತೀನಿ ಅಂತಾ ಹೋದರು.
ನಿನ್ನೆ ಭದ್ರಾವತಿಯಲ್ಲಿ ಪ್ರಚಾರ ನಡೆಸಿದ್ದರು. ರಾತ್ರಿ ತಡವಾಗಿ ಮನೆಗೆ ಮರಳಿದ್ದರು. ಆದರೆ ಐದೇ ನಿಮಿಷದಲ್ಲಿ ಬರುತ್ತೇನೆ ಎಂದು ಕಾರು ಚಲಾಯಿಸಿಕೊಂಡು ಹೊರಗೆ ಹೋದವರು, ಹಿಂತಿರುಗಿಲ್ಲ. ಮೊಬೈಲ್ ಕೂಡ ಮನೆಯಲ್ಲೆ ಇದೆ ಎಂದು ಯುಸುಫ್ ಖಾನ್ ಪುತ್ರ ಮೊಹಮ್ಮದ್ ಸುಲೇಮಾನ್ ಖಾನ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು
















