ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 29 ಜನವರಿ 2020
ಕ್ಯಾಂಟರ್ ಪಲ್ಟಿಯಾಗಿ ಶಿವಮೊಗ್ಗದ ಹೊಸಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಬರುತ್ತಿದ್ದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಚನ್ನಗಿರಿ ತಾಲೂಕಿನ ಗಡಿಯಲ್ಲಿರುವ ಚನ್ನಗಿರಿಯ ಮಾವಿನಕಟ್ಟೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಗರತ್ನಮ್ಮ (70), ವರಲಕ್ಷ್ಮಿ (60), ಅನುಷಾ (25) ಮೃತಪಟ್ಟಿದ್ದಾರೆ. 17 ಜನರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ ಆಂಧ್ರದ ಹಿಂದೂಪುರದಿಂದ ನೆಂಟರು, ಇಷ್ಟರು ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನ ಹಳ್ಳಕ್ಕೆ ಉರುಳಿ ಬಿದ್ದಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422