ಶಿವಮೊಗ್ಗ ಲೈವ್.ಕಾಂ |THIRTHAHALLI CRIME NEWS | 11 DECEMBER 2020
ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ಅದರಲ್ಲಿ ಸಾಗಿಸುತ್ತಿದ್ದ ಗೋವುಗಳು ಸಾವನ್ನಪ್ಪಿವೆ. ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಕ್ಯಾಂಟರ್‍ನಲ್ಲಿದ್ದ ಗೋವುಗಳನ್ನು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಎಂಟು ಗೋವು, ಎಮ್ಮೆ ಸಾವು
ಕ್ಯಾಂಟರ್‍ನಲ್ಲಿದ್ದ ಎಂಟು ಗೋವುಗಳು, ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳೀಯರು, ಪೊಲೀಸರ ನೆರವಿನಿಂದಾಗಿ ಆರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಪ್ರಾಥಮಿಕ ಹಂತದಲ್ಲಿ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕ್ಯಾಂಟರ್ ವಾಹನ ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ತನಿಖೆ ಆರಂಭಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]