ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.
ಶಿವಮೊಗ್ಗದ ಸಾಗರ ರಸ್ತೆಯ ಟ್ರಿ ಪಾರ್ಕ್ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಬೇರೆ ವಾಹನ ಸವಾರರು ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎದುರಿನಿಂದ ಬೇರೆ ವಾಹನಗಳು ಬಂದಿದ್ದರೆ ದೊಡ್ಡ ಪ್ರಮಾಣದ ಹಾನಿ ಸಂಭವಿಸುವ ಸಾದ್ಯತೆ ಇತ್ತು. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]