ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ, ಅರಣ್ಯ ಇಲಾಖೆ ಗುತ್ತಿಗೆದಾರ ಸ್ಥಳದಲ್ಲೆ ಸಾವು

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಮರಕ್ಕೆ ಕಾರು ಡಿಕ್ಕಿಯಾಗಿ ಅರಣ್ಯ ಇಲಾಖೆ ಗುತ್ತಿಗೆದಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿ ಎನ್‍.ಆರ್‍.ಪುರಕ್ಕೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ.

ಮಲ್ಲಿಗೇನಹಳ್ಳಿಯ ಲಿಂಗರಾಜು (30) ಮೃತರು. ಜಂಕ್ಷನ್ – ಉಂಬ್ಳೇಬೈಲು ಮಧ್ಯೆ ಅಪಘಾತವಾಗಿದೆ. ಲಿಂಗರಾಜು ಅವರು ಕಾರು ಚಲಾಯಿಸುತ್ತಿದ್ದರು. ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ.

Shivamogga Live Promotion

ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಲಿಂಗರಾಜು ಅವರಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೆ ಮೃತರಾಗಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment