ಕಾಚಿನಕಟ್ಟೆ ಸಮೀಪ ಕಾರು ಅಪಘಾತ ಕೇಸ್, ಮತ್ತೊಬ್ಬ ಯುವಕ ಸಾವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟಂಬರ್ 2020

ಶಿವಮೊಗ್ಗದ ಕಾಚಿನಕಟ್ಟೆ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮತ್ತೊಬ್ಬ ಯುವಕ ಮೃತನಾಗಿದ್ದಾನೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಮೃತರಾಗಿದ್ದು, ಇನ್ನಿಬ್ಬರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೊಡ್ಡಿಬೀಳು ಬಳಿ ಕಾರು ಅಪಘಾತಕ್ಕೀಡಾಯಿತು. ಎನ್‍.ಆರ್.ಪುರದ ಜೈಸನ್ (20) ಸ್ಥಳದಲ್ಲೆ ಮೃತರಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅನುರಾಗ್ (21) ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಮುನ್ನೆವೆ ಮೃತರಾಗಿದ್ದಾರೆ.

ವಿದ್ಯುತ್ ಕಂಬ, ಮರಕ್ಕೆ ಡಿಕ್ಕಿ

ಜೈಸನ್, ಅನುರಾಗ್, ಸಮಿತ್ ಸುಕುಮಾರ್, ಸಮಿತ್ ಎಂ.ಜೇಮ್ಸ್ ಅವರು ಭಾನುವಾರ ಬೆಳಗ್ಗೆ ಎನ್‍.ಆರ್.ಪುರದಿಂದ ಶಿವಮೊಗ್ಗಕ್ಕೆ ಬಂದಿದ್ದರು. ಕೆಲಸ ಮುಗಿಸಿ ಹಿಂತಿರುಗುವಾಗ ಅಪಘಾತವಾಗಿದೆ. ಅತಿ ವೇಗವಾಗಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಆ ಬಳಿಕ ಮರಕ್ಕೆ ಅಪ್ಪಳಿಸಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment