ಕಾರು, ಬೈಕ್‌ ಮುಖಾಮುಖಿ ಡಿಕ್ಕಿ, ಮೂವರು ಯುವಕರ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 JUNE 2024

BHADRAVATHI : ಕಾರು (Car) ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಯಡೆಹಳ್ಳಿ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರು ಮತ್ತು ಎದುರಿನಿಂದ ಬಂದ್‌ ಬೈಕ್‌ ಡಿಕ್ಕಿಯಾಗಿದೆ.

ಘಟನೆಯಲ್ಲಿ ರಾಕೇಶ್‌, ರಾಜೇಶ್‌ ಮತ್ತು ಕೀರ್ತಿ ಎಂಬವವರಿಗೆ ಗಂಭೀರ ಗಾಯವಾಗಿದೆ. ಅಪಘಾತದ ಬಳಿಕ ಮೂವರು ರಸ್ತೆಯಲ್ಲಿ ಬಿದ್ದು ಹೊರಳಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಯುವಕರು ಹೊಳೆಬೈರನಹಳ್ಳಿ ಗ್ರಾಮದರು ಎಂದು ತಿಳಿದು ಬಂದಿದೆ. ಕಾರು ರಸ್ತೆ ಪಕ್ಕದ ಹಾರಿ ನಿಂತಿದೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಯುವಕರನ್ನು ಸುಬ್ಬಯ್ಯ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಡೆಂಗ್ಯುಗೆ ಸಾಗರದ ಆರೋಗ್ಯ ಇಲಾಖೆ ನೌಕರ ಶಿವಮೊಗ್ಗದಲ್ಲಿ ಕೊನೆಯುಸಿರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 13, 2024

Leave a Comment