ಶಿವಮೊಗ್ಗ ಲೈವ್.ಕಾಂ | SAGARA NEWS | 5 ಆಗಸ್ಟ್ 2021
ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತ್ನಿಗೆ ಗಾಯವಾಗಿದ್ದು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಿ.ಹೆಚ್.ರಸ್ತೆಯ ಬೃಂಗಿ ಮಠದ ಸಮೀಪ ಘಟನೆ ಸಂಭವಿಸಿದೆ. ಬೈಕ್ ಸವಾರ ನರೇಂದ್ರ (38) ಗಂಭೀರ ಗಾಯಗೊಂಡು ಮೃತರಾಗಿದ್ದಾರೆ. ಅವರ ಪತ್ನಿ ರಾಜೇಶ್ವರಿ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಘಟನೆ?
ಹಿಂದಿನಿಂದ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿಯಾಗಿದೆ. ಘಟನೆ ಬಳಿಕ ಕಾರು ಚಾಲಕನೆ ನರೇಂದ್ರ ಮತ್ತು ಅವರ ಪತ್ನಿ ರಾಜೇಶ್ವರಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಪೊಲೀಸರಿಗೆ ಶರಣಾಗಿರುವುದಾಗಿ ಗೊತ್ತಾಗಿದೆ.
ನರೇಂದ್ರ ಮತ್ತು ಅವರ ಪತ್ನಿ ರಾಜೇಶ್ವರಿ ಅವರು ಶಿವಮೊಗ್ಗದ ಗೋಪಾಳದಲ್ಲಿ ವಾಸವಾಗಿದ್ದರು. ಸಾಗರ ತಾಲೂಕಿನ ನಿಟ್ಟೂರಿನ ಇವರು, ತಮ್ಮೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200