ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 JUNE 2024
SAGARA : ಕಾರು ಡಿಕ್ಕಿಯಾಗಿ ಬೈಕ್‌ನಲ್ಲಿ (Bike) ತೆರಳುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಸಾಗರ ತಾಲೂಕು ಕುಗ್ವೆ ಬಳಿ ಘಟನೆ ಸಂಭವಿಸಿದೆ. ಕುಂದಾಪುರದ ಅನುಷಾ(20) ಮೃತ ವಿದ್ಯಾರ್ಥಿನಿ.
ಸಾಗರದ ಲಾಲ್ ಬಹದ್ದೂರ್ ಶಾಸ್ತ್ರಿ ಕಾಲೇಜಿನಲ್ಲಿ ದ್ವಿತೀಯ ಬಿಸಿಎ ಓದುತ್ತಿದ್ದಳು. ಬೈಕ್‌ನಲ್ಲಿ ಸ್ನೇಹಿತೆ ಜತೆಗೆ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದಾಗ ಅದೇ ಮಾರ್ಗದಲ್ಲಿ ಜೋಗದ ಕಡೆಗೆ ಹೊರಟಿದ್ದ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡಿದ್ದ ಅನುಷಾಳನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾಳೆ. ಸ್ಕೂಟಿಯಲ್ಲಿ ಹಿಂಬದಿ ಕುಳಿತಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾಳೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ ಅನುಷಾ
ವಿದ್ಯಾರ್ಥಿನಿ ತಂದೆ ಸಾಗರ ಕೆಎಸ್‌ಆರ್‌ಟಿಸಿಯಲ್ಲಿ ಹವಾಲ್ದಾರ್ ಆಗಿದ್ದಾರೆ. ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಹರನಾಥರಾವ್ ಸೇರಿದಂತೆ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಇನ್ನು ಐದು ವರ್ಷಕ್ಕೆ 44 ಸಾವಿರ ಕಿ.ಮೀ ರೈಲ್ವೆ ಮಾರ್ಗಕ್ಕೆ ಕವಚ ತಂತ್ರಜ್ಞಾನ, ಏನಿದು ಟೆಕ್ನಾಲಜಿ?
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು





