ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 ಸೆಪ್ಟೆಂಬರ್ 2021
ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಬಚಾವ್ ಆಗಿದ್ದಾರೆ.
ಕಾರ್ಕಳದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗುಂಬೆ ಘಾಟಿಯ ಮೊದಲ ತಿರುವಿನಲ್ಲಿ ಘಟನೆ ಸಂಭವಿಸಿದೆ.
ಸಕೆಂಡ್ ಹ್ಯಾಂಡ್ ಕಾರು
ಶಿವಮೊಗ್ಗದ ಅರವಿಂದ್ ಎಂಬುವವರು ಕಾರ್ಕಳದಲ್ಲಿ ಈ ಕಾರನ್ನು ಖರೀದಿಸಿದ್ದರು. ಇವತ್ತು ಕಾರನ್ನು ಖರೀದಿಸಿ ಶಿವಮೊಗ್ಗಕ್ಕೆ ತರುತ್ತಿದ್ದರು.ಕಾರಿನಲ್ಲಿ ಅರವಿಂದ್ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮೂವರು ಕಾರಿನಿಂದ ಇಳಿದಿದ್ದಾರೆ.
ಇನ್ನು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಬಂದ್ ಆಗಿತ್ತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೆಂಕಿ ನಂದಿಸಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






