ಶಿವಮೊಗ್ಗ ಲೈವ್.ಕಾಂ | KARGAL NEWS | 29 ಆಗಸ್ಟ್ 2021
ಕಾರು ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಕಾರ್ಗಲ್ ಸಮೀಪದ ನಾಗವಳ್ಳಿಯ ಹೆರೋಡಿ ಬಳಿ ತಿರುವಿನಲ್ಲಿ ಘಟನೆ ಸಂಭವಿಸಿದೆ.
ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ್ದು ಓರ್ವನಿಗೆ ಗಂಭೀರವಾಗಿ ಪೆಟ್ಟಾಗಿದೆ. ಹುಬ್ಬಳ್ಳಿಯ ಪವನ್ (40) ಗಾಯಗೊಂಡವ.
ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಸ್ ಭಟ್ಕಳ ಮಾರ್ಗವಾಗಿ ಸಾಗರಕ್ಕೆ ಹಾಗೂ ಕಾರು ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತಿತ್ತು. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200