ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದ ಗಜಾನನ ಗೇಟ್ ಸರ್ಕಲ್ ಬಳಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಹರೇಕರೆ ನಿವಾಸಿ ಅರ್ಜುನ್.ವಿ (41) ಮೃತ ದುರ್ದೈವಿ.
ಕಲ್ಲೂರು ಇಂಡಸ್ಟ್ರಿಯಲ್ ಏರಿಯಾದ ಸುದ್ದಿ ಭಾರತಿ ಪ್ರೆಸ್‌ನಲ್ಲಿ ಹೆಲ್ಪರ್ ಆಗಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 27ರ ರಾತ್ರಿ ಕೆಲಸ ನಿಮಿತ್ತ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ನ್ಯೂಮಂಡ್ಲಿ ಸರ್ಕಲ್ ಕಡೆಯಿಂದ ಕಲ್ಲೂರು ಮಂಡ್ಲಿ ಕಡೆಗೆ ಎನ್.ಟಿ. ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದಾಗ, ತೀರ್ಥಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಸಾಗರದ ಕಾಸ್ಪಾಡಿ ಕೆರೆ ಏರಿ ಮೇಲೆ ತಪ್ಪಿದ ಅನಾಹುತ, ಹೇಗಾಯ್ತು ಅಪಘಾತ?
ಅಪಘಾತದ ತೀವ್ರತೆಗೆ ಬೈಕ್ ಸವಾರ ಅರ್ಜುನ್ ಕೆಳಗೆ ಬಿದ್ದು ತಲೆ, ಮುಖ ಹಾಗೂ ಎದೆಗೆ ಗಂಭೀರ ಪೆಟ್ಟಾಗಿತ್ತು. ಕೂಡಲೇ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅರ್ಜುನ್ ಮೃತಪಟ್ಟಿದ್ದಾರೆ. ಈ ಸಂಬಂಧ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
