ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2024
ಶಿವಮೊಗ್ಗ : ಬಿ.ಹೆಚ್.ರಸ್ತೆಯಲ್ಲಿ ಕಾರಿನ ಹಿಂಬದಿ ಗಾಜು (Glass) ಒಡೆದು ಬ್ಯಾಗ್ ಕಳ್ಳತನ ಮಾಡಲಾಗಿದೆ. ಖಾಸಗಿ ಕಂಪನಿ ಉದ್ಯೋಗಿ ರೋಹಿತ್ ಎಂಬುವವರು ಕಾರು ನಿಲ್ಲಿಸಿ ತರಕಾರಿ ಖರೀದಿಸಿ ಬರುವಷ್ಟರಲ್ಲಿ ಘಟನೆ ನಡೆದಿದೆ.
ಕರ್ನಾಟಕ ಸಂಘದ ಮುಂಭಾಗ ರೋಹಿತ್ ಅವರು ತಮ್ಮ ಐ20 ಕಾರನ್ನು ಪಾರ್ಕಿಂಗ್ ಮಾಡಿದ್ದರು. ತರಕಾರಿ ಖರೀದಿಸಿ ಕಾರಿನ ಬಳಿ ಬಂದಾಗ ಬಲಭಾಗದ ಹಿಂಬದಿ ಗಾಜು ಒಡೆದಿರುವುದು ಗಮನಕ್ಕೆ ಬಂದಿತ್ತು. ಪರಿಶೀಲಿಸಿದಾಗ ಹಿಂಬದಿ ಸೀಟಿನ ಮೇಲಿಟ್ಟಿದ್ದ ಲ್ಯಾಪ್ಟಾಪ್ ಬ್ಯಾಗ್ ನಾಪತ್ತೆಯಾಗಿತ್ತು.
roa
ಲ್ಯಾಪ್ಟಾಪ್ ಬ್ಯಾಗ್ನಲ್ಲಿ ಹೆಚ್.ಪಿ.ಕಂಪನಿಯ ಲ್ಯಾಪ್ಟಾಪ್, ಇಯರ್ ಪಾಡ್, ಬ್ಲೂಟೂತ್ ಡಿವೈಸ್, ಐ20 ಕಾರಿನ ಮೂಲ ಆರ್.ಸಿ.ಕಾರ್ಡ್ ಇತ್ತು ಎಂದು ರೋಹತ್ ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಕುವೆಂಪು ವಿವಿ ಮುಚ್ಚಲು ನಡೀತಿದ್ಯ ಹುನ್ನಾರ? ಡಿ.ಎಸ್.ಅರುಣ್ ಆತಂಕ, ಕಾರಣಗಳೇನು?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





